Wednesday, July 22, 2026
spot_imgspot_img
spot_imgspot_img

ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ; ಜಮೀರ್ ಅಹ್ಮದ್ ​ಖಾನ್​

- Advertisement -
- Advertisement -

ಹುಬ್ಬಳ್ಳಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್​ಖಾನ್​ಫೆಬ್ರವರಿ 13ರಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಿಜಾಬ್​ ಅಂದ್ರೆ ಮುಸಲ್ಮಾನರಲ್ಲಿ ಗೋಶಾಪರದ ಅಂತ ಹೇಳ್ತೇವೆ. ಅವರ ಮನೆಯಲ್ಲಿ ಹೆಣ್ಣುಮಕ್ಕಳಿದ್ದಾರೋ ಇಲ್ಲವೋ ಗೊತ್ತಿಲ್ಲ. ಅವರ ಮನೆಯಲ್ಲಿ ಹೆಣ್ಣುಮಕ್ಕಳು ಇದ್ದಿದ್ದರೆ ಗೊತ್ತಾಗುತ್ತಿತ್ತು. ಹೆಣ್ಣುಮಕ್ಕಳು ತಮ್ಮ ರಕ್ಷಣೆಗಾಗಿ ಹಿಜಾಬ್​ ಧರಿಸುತ್ತಾರೆ. ಹೆಣ್ಣುಮಕ್ಕಳು ದೊಡ್ಡವರಾದ ಮೇಲೆ ದೇಹರಚನೆ ಕಾಣಿಸಬಾರದು. ದೇಹರಚನೆ ಹೊರಗೆ ಕಾಣಿಸಬಾರದು ಎಂದು ಹಿಜಾಬ್​ ಬಳಸ್ತಾರೆ. ಅತ್ಯಾಚಾರ ಪ್ರಕರಣ ಹೆಚ್ಚಾಗಿರುವುದು ಭಾರತದಲ್ಲಿ. ಹಿಜಾಬ್​ ಹಾಕದಿರುವ ಕಾರಣದಿಂದ ಇಂತಹ ಘಟನೆ ನಡೆದಿದೆ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.

ಹಿಜಾಬ್​ ಧರಿಸುವುದು ಈಗಿನದ್ದಲ್ಲ, ಹಳೆಯ ಪದ್ಧತಿಯಾಗಿದೆ. ಯಾರು ಧರಿಸಬೇಕು ಅನಿಸುತ್ತೋ ಅವರು ಹಾಕಿಕೊಳ್ಳಬಹುದು. ಕಡ್ಡಾಯವಾಗಿ ಹಿಜಾಬ್​ ಧರಿಸಬೇಕೆಂಬ ನಿಯಮವಿಲ್ಲ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​​ ಹೇಳಿಕೆ ನೀಡಿದ್ದಾರೆ. ಇನ್ನು ಹಿಜಾಬ್ ಹಾಕಿಕೊಳ್ಳುವ ಬಗ್ಗೆ ಎಂಎಲ್​ಸಿ ಸಿಎಂ ಇಬ್ರಾಹಿಂ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಿಜಾಬ್ ಹಾಕಿಕೊಳ್ಳುವುದು ಮುಸ್ಲಿಂ ಸಮುದಾಯದ ಸಂಪ್ರದಾಯ. ಹಿಂದೂ ಧರ್ಮದಲ್ಲಿ ಮಹಿಳೆಯರು ತಲೆ ಮೇಲೆ ಸೆರಗು ಹಾಕುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯದಲ್ಲಿ ಹಿಜಾಬ್​ ಹಾಕಿಕೊಳ್ಳುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

- Advertisement -

Related news

error: Content is protected !!