Wednesday, June 24, 2026
spot_imgspot_img
spot_imgspot_img

ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಸಂಬಂಧಿ ಕೊಲೆ ಪ್ರಕರಣ – ಮಲತಾಯಿ ಪೊಲೀಸ್ ವಶಕ್ಕೆ !

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ನಿಕಟ ಸಂಬಂಧಿ ಸಿದ್ದಾರ್ಥ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ ತಾಯಿ ಇಂದೂ ಚೌಹಣ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

28 ವರ್ಷ ಪ್ರಾಯದ ಸಿದ್ದಾರ್ಥ ಅವರನ್ನು ಜನವರಿ 19ರಂದು ಅಪಹರಿಸಲಾಗಿತ್ತು. ಆಂಧ್ರ ಪ್ರದೇಶದ ತಿರುಪತಿ ಬಳಿ ಅವರನ್ನು ಹತ್ಯೆ ಮಾಡಲಾಗಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿದ್ದಾರ್ಥ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಅಮೆರಿಕಕ್ಕೆ ತೆರಳುತ್ತೇನೆ ಎಂದು ಹೇಳಿ ತಂದೆಗೆ ಹೇಳಿದ್ದ ಸಿದ್ದಾರ್ಥ ಬಳಿಕ ನಿಗೂಢವಾಗಿ ನಾಪತ್ತೆಯಾಗಿದ್ದರು. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಲಾಗಿತ್ತು.

- Advertisement -

Related news

error: Content is protected !!