- Advertisement -



- Advertisement -
ವಿಟ್ಲ: ಗ್ರಾಮ ಒನ್, ಮಾಣಿಲ ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯಕೇಂದ್ರ ಪೆರುವಾಯಿ ಇವುಗಳ ಸಹಯೋಗದೊಂದಿಗೆ “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಕಾರ್ಡ್ ವಿತರಣಾ ಆಂದೋಲನಾ ಕಾರ್ಯಕ್ರಮ ಮುರುವ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೆರುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣಮೂರ್ತಿ, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ, ಮಾಣಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಪೆರುವಾಯಿ ಆರೋಗ್ಯ ಕೇಂದ್ರದ ಸಿಹೆಚ್‌ಓ ಮಧು ತೇಲಿ, ಸಿದ್ದು ಗೌಡರ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಹರಿಣಾಕ್ಷಿ, ಅಮಿತಾ, ಹಾಗೂ ಆಶಾ ಕಾರ್ಯಕರ್ತೆಯರಾದ ರತ್ನಾ, ಬೇಬಿ, ಜಾನಕಿ ಹಾಗೂ ಮಾಣಿಲ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


- Advertisement -