- Advertisement -
- Advertisement -
ಕೆಲವು ದಿನಗಳ ಹಿಂದೆ ವಿಟ್ಲ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಪಳಿಕೆ ಎಂಬಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿಯ ಕುಟುಂಬಸ್ಥರನ್ನು ಪತ್ತೆ ಮಾಡಿದ್ದಾರೆ.
ಬೆಂಗಳೂರಿನ ಯಲಹಂಕ ನಿವಾಸಿ ಈಶ್ವರ ಅವರ ಪುತ್ರ ಮೋಹನ್ ಕುಮಾರ್ ಇ ಎಂಬಾತ ಜೀವನದಲ್ಲಿ ಜಿಗುಪ್ಸೆಗೊಂಡು ರಾಷ್ಟ್ರೀಯ ಹೆದ್ದಾರಿಯ ಮಾಣಿ ಕಡೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದರು.
ಮೃತನ ಗುರುತು ಪತ್ತೆಯಾಗಿರಲಿಲ್ಲ. ವಾರೀಸುದಾರರು ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದರು. ಆದರೆ ಪತ್ತೆಯಾಗಿರಲಿಲ್ಲ. ಇದೀಗ ವಿಟ್ಲ ಪೊಲೀಸರ ತಂಡ ಬೆಂಗಳೂರಿನಲ್ಲಿ ಆತನ ಕುಟುಂಬದವರನ್ನು ಪತ್ತೆ ಹಚ್ಚಿ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಹಸ್ತಾಂತರ ಮಾಡಿದ್ದಾರೆ.

- Advertisement -