Sunday, August 14, 2022
spot_imgspot_img
spot_imgspot_img

ಮುದ್ದಾದ ಕಂದಮ್ಮನನ್ನು ಕೊಂದು ತಾಯಿ ನೇಣಿಗೆ ಶರಣು

- Advertisement -G L Acharya G L Acharya
- Advertisement -

ಬೆಂಗಳೂರು : ಸಿಲಿಕಾನ್‌ ಸಿಟಿಯ ಆರ್‌ ಆರ್‌ ನಗರದಲ್ಲಿ ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್‌ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ʻನನ್ನ ಸಾವಿಗೆ ಯಾರೂ ಕಾರಣರಲ್ಲ ಸ್ವಾರಿ ಅಮ್ಮʼ ಎಂದು ಡೆತ್‌ ನೋಟ್‌ ಬರೆದಿಟ್ಟು ಮಹಿಳೆ ಮೃತಪಟ್ಟಿದ್ದಾರೆ. ಮಗು ರಿಯಾಳನ್ನು ಕೊಂದು ತಾಯಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಡೆತ್ ನೋಟ್ ನಲ್ಲಿ’ Nobody is responsible for it i just felt life is full of shits i am sorry mom and divya Love you shona ಎಂದು ದೀಪಾ ಬರೆದಿದ್ದಾರೆ. ಇನ್ನೂ ಸ್ಥಳದಲ್ಲಿ ಆರ್ ಆರ್ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ದೀಪಾ ಅವರು ಬ್ರಹ್ಮಾವರ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಕುಟುಂಬದ ಜೊತೆ ವಾಸವಾಗಿದ್ದರು. ದೀಪಾ ಅವರ ಪತಿ ಆದರ್ಶ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ. 2017ರಲ್ಲಿ ದೀಪಾ ಮತ್ತು ಆದರ್ಶ್ ಅವರ ಮದುವೆ ಆಗಿತ್ತು. ವಾರದಿಂದ ಜ್ವರ ಹಾಗೂ ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ ನೋವು ಕಡಿಮೆ ಆಗಿರಲಿಲ್ಲ. ಹೀಗಾಗಿ ದೀಪಾ ಜಿಗುಪ್ಸೆಗೊಂಡಿದ್ದರು ಎಂದು ತಿಳಿದು ಬಂದಿದೆ. ರಾತ್ರಿ ಮಲಗಿದ್ದ ವೇಳೆ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ನೇಣು ಹಾಕಿ ಕೊಲೆ ಮಾಡಿದ್ದಾರೆ.

- Advertisement -

Related news

error: Content is protected !!