Saturday, August 29, 2026
spot_imgspot_img
spot_imgspot_img

ಮುರುಘಾ ಶ್ರೀಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ..!

- Advertisement -
- Advertisement -

ನಿನ್ನೆ ರಾತ್ರಿ ಬಂಧನಕ್ಕೆ ಒಳಗಾದ ಚಿತ್ರದುರ್ಗದ ಮುರುಘಾಮಠದ ಶ್ರೀಗಳನ್ನು ನಿನ್ನೆ ರಾತ್ರಿ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ಕೋರ್ಟ್‌ ಗೆ ಹಾಜರುಪಡಿಸಿದ್ದಾರೆ.

ಈ ವೇಳೆ ವಿಚಾರಣೆ ನಡೆಸಿದ ನ್ಯಾ. ಕೋಮಲ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.

ಈ ನಡುವೆ ಮುರುಘಾ ಶರಣರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಚಿತ್ರದುರ್ಗದ ಒಂದನೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ವಾದಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸದ್ಯ ಅವರನ್ನು ನ್ಯಾಯಾಧೀಶರ ಮುಂದೆ ಕೂಡ ಹಾಜರು ಪಡಿಸಿ, ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

- Advertisement -

Related news

error: Content is protected !!