Friday, September 4, 2026
spot_imgspot_img
spot_imgspot_img

ಮುಲ್ಕಿ: ಬಸ್ ಢಿಕ್ಕಿ; ಬಾಲಕ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಮುಲ್ಕಿ: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಬಸ್ಸು ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಮೃತ ಬಾಲಕನನ್ನು ಉಲ್ಲಂಜೆ ನಿವಾಸಿ ಚರಣ್ (15) ಗುರುತಿಸಲಾಗಿದೆ ಎಂದು ಗುರುತಿಸಲಾಗಿದೆ.

ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿದೆ.

ಇನ್ನು ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಬಸ್ಸು ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!