- Advertisement -
- Advertisement -


ಬೆಂಗಳೂರು: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಆರಂಭವಾಗಿದ್ದು, ಪರೀಕ್ಷಾ ಫಲಿತಾಂಶ ಮೇ ಎರಡನೇ ವಾರದಲ್ಲಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಅವರು, ಮಾರ್ಚ್ 30ರಿಂದ ಎಪ್ರಿಲ್ 15ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯಾದ್ಯಾಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದು, 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಈಗಾಗಲೇ ಮೌಲ್ಯಮಾಪನ ಕಾರ್ಯಕ್ಕೆ ಒಟ್ಟು 73 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ. ಇನ್ನು ಪರೀಕ್ಷಾ ಫಲಿತಾಂಶ ಸಂಬಂಧ ಶೀಘ್ರ ಅಧಿಕೃತ ಪ್ರಕಟನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
- Advertisement -