Sunday, July 6, 2025
spot_imgspot_img
spot_imgspot_img

ಮೈಸೂರಿನ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಿರ್ಮಾಣಗೊಂಡಿರುವ ಈಜುಕೊಳ ವಿವಾದ‌; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ

- Advertisement -
- Advertisement -

ಬೆಂಗಳೂರು: ಮೈಸೂರಿನ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ನಿರ್ಮಾಣಗೊಂಡಿರುವ ಈಜುಕೊಳ ವಿವಾದ‌ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟವನ್ನು ತಂದೊಡ್ಡುವ ಸಾದ್ಯತೆಯಿದೆ.

ಶಾಸಕ ಸಾರಾ ಮಹೇಶ್ ವಿರುದ್ಧ ಗುಡುಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರಿಗೆ ಈಜುಕೊಳ ನಿರ್ಮಾಣ ಪ್ರಕರಣ ಮುಳುವಾಗುವ ಲಕ್ಷಣಗಳು ಗೋಚರಿಸುತ್ತಿದೆ. ಈಗಾಗಲೇ ಪ್ರಕರಣ ದ ತನಿಖೆಗೆ ಸಂಬಂಧಿಸಿದ ವರದಿಯನ್ನು ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಸಲ್ಲಿಸಿದ್ದು, ಜಿಲ್ಲಾಧಿಕಾರಿ ನಿವಾಸ ಜಲಸನ್ನಿಧಿಯಲ್ಲಿ ಈಜುಕೊಳ ನಿರ್ಮಾಣಕ್ಕೆ ಪಾರಂಪರಿಕ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆದಿಲ್ಲ ಅಂದಿದ್ದಾರೆ.

ಅದ್ರಲ್ಲೂ ಈಜುಕೊಳ ನಿರ್ಮಾಣಕ್ಕೆ 32 ಲಕ್ಷ ರೂ. ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ, ಲೋಕೋಪಯೋಗಿ ಇಲಾಖೆಯಿಂದ ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದಿಲ್ಲ ಎಂದು ತನಿಖಾ ವರದಿಯಲ್ಲಿ 6 ನ್ಯೂನತೆಗಳನ್ನು ಪತ್ತೆ ಹಚ್ಚಲಾಗಿದೆ.

ಈ ಹಿಂದೆ ಈಜುಕೊಳದ ವಿಷಯದಲ್ಲಿ ಆರೋಪಗಳು ಕೇಳಿ ಬಂದಾಗ ಪ್ರತಿಕ್ರಿಯಿಸಿದ್ದ ಸಿಂಧೂರಿ 50 ಲಕ್ಷ ರೂ. ಖರ್ಚಾಗಿದೆ ಅನ್ನೋದು ಸುಳ್ಳು. ಇದು 28.72 ಲಕ್ಷ ರೂ. ವೆಚ್ಚದ ಯೋಜನೆಯಾಗಿದೆ.

ಕಡಿಮೆ ವೆಚ್ಚದಲ್ಲಿ ಈಜುಕೊಳಗಳನ್ನು ನಿರ್ಮಿಸಲು ನಿರ್ಮಿತಿ ಕೇಂದ್ರ 5 ವರ್ಷಗಳ ಹಿಂದೆ ಯೋಜನೆ ರೂಪಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳವನ್ನು ನಿರ್ಮಿಸಲಾಗಿದೆ. ಈ ವರ್ಷ ಜನವರಿ ತಿಂಗಳಿಂದ ನಿರ್ಮಾಣ ಕಾಮಗಾರಿ ಶುರುವಾಗಿದೆ. ಈ ಈಜುಕೊಳವನ್ನು ಸ್ಥಾಪಿಸಲು ನಿರ್ಮಿತಿ ಕೇಂದ್ರದ ಕ್ಯಾಂಪಸ್​ನಲ್ಲಿ ಸ್ಥಳವಿಲ್ಲದ ಕಾರಣಕ್ಕೆ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿ ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು.

- Advertisement -

Related news

error: Content is protected !!