Tuesday, July 23, 2024
spot_imgspot_img
spot_imgspot_img

ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ 10.ರೂ ನೀಡಿದ 60 ವರ್ಷದ ಅಜ್ಜ ಅರೆಸ್ಟ್‌..!!

- Advertisement -G L Acharya panikkar
- Advertisement -
vtv vitla

60 ವರ್ಷದ ಅಜ್ಜನೊಬ್ಬ 15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿ ವಿಷಯವನ್ನು ಯಾರಿಗೂ ತಿಳಿಸದಂತೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ ನಡೆದಿದೆ.ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿದ್ದಾನೆ.ಕಟ್ಟಿಗೆ ಕಡಿಯಲು ಕೊಡಲಿ ತರುವಂತೆ ಮೊಮ್ಮಗಳಿಗೆ ತಿಳಿಸಿದ್ದಾನೆ. ಮೊಮ್ಮಗಳು ಮನೆಗೆ ಹೋಗಿ ಕೊಡಲಿ ತಂದಾಗ, ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಮೊಮ್ಮಗಳಿಗೆ 10 ರೂ. ನೀಡಿದ್ದಾನೆ.

ಈ ವೇಳೆ ಗ್ರಾಮಸ್ಥನೊಬ್ಬ ಕಂಡು, ಜನ ಸೇರಿಸಿ, ಅಜ್ಜನನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ಕುಟುಂಬಸ್ಥರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಅಜ್ಜನನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

- Advertisement -

Related news

error: Content is protected !!