Tuesday, July 28, 2026
spot_imgspot_img
spot_imgspot_img

ರಜೆಯಲ್ಲಿ ಊರಿಗೆ ಬಂದಿದ್ದ CRPF ಯೋಧ ಅಪಘಾತಕ್ಕೆ ಬಲಿ

- Advertisement -
- Advertisement -

ಕೊಡಗು: ಮೂರು ದಿನಗಳ ಹಿಂದೆ ಊರಿಗೆ ಬಂದಿದ್ದ CRPF ಯೋಧ ಅಪಘಾತಕ್ಕೆ ಬಲಿಯಾದ ಘಟನೆ ಸೋಮವಾರಪೇಟೆಯಲ್ಲಿ ನಡೆದಿದೆ. ಕೆ.ಬಿ.ಡಾಲು(36) ಮೃತ ದುರ್ದೈವಿ.

ಯಡವಾರೆ ಗ್ರಾಮದ ಕಲ್ಲುಗುದ್ದೆ ದಿ. ಬಾಲಕೃಷ್ಣ ಎಂಬವರ ಪುತ್ರ ಯೋಧ ಡಾಲು, 13 ವರ್ಷದಿಂದ CRPFನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಜಮ್ಮಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾಲು, ಮೂರು ದಿನಗಳ ಹಿಂದೆ ರಜೆಯಲ್ಲಿ ಮನೆಗೆ ಬಂದಿದ್ದರು.

ನಿನ್ನೆ ಸೋಮವಾರಪೇಟೆ ಪಟ್ಟಣಕ್ಕೆ ಬಂದು ಬ್ಯಾಂಕ್ ವ್ಯವಹಾರ ಮುಗಿಸಿ, ಸ್ಕೂಟರ್ ನಲ್ಲಿ ವಾಪಾಸ್ಸು ಮನೆಗೆ ತೆರಳುತ್ತಿದ್ದ ಸಂದರ್ಭ ನಗರೂರು ಸಮೀಪದ ಅಪಘಾತ ಸಂಭವಿಸಿತ್ತು. ಆ ವೇಳೆ ರಸ್ತೆಗೆ ಬಿದ್ದ ಡಾಲು ಹೆಲ್ಮಟ್ ಧರಿಸದ ಕಾರಣ ತಲೆಯ ಹಿಂಭಾಗಕ್ಕೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿತ್ತು.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ನಂತರ ಮೈಸೂರಿಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್‌ನಲ್ಲಿದ್ದ ಕಾಗಡಿಕಟ್ಟೆ ಗ್ರಾಮದ ಮನೋಜ್ ಭಟ್ ಹಾಗೂ ಪೈಂಟರ್ ಆಸೀಫ್ ತೀವ್ರ ಗಾಯಗೊಂಡು ಮಡಿಕೇರಿ ಮತ್ತು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಡಾಲು ತಾಯಿ ನಾಗವೇಣಿ, ಪತಿ ರಾಜೇಶ್ವರಿ, ಏಳು ಮತ್ತು ಎರಡೂವರೆ ವರ್ಷದ ಇಬ್ಬರು ಪುತ್ರಿಯರಿದ್ದಾರೆ. ಕುಟುಂಬದ ಜವಾಬ್ದಾರಿ ಹೊತ್ತಿದ್ದ ಮಗನನ್ನು ಕಳೆದುಕೊಂಡ ತಾಯಿ ಅಕ್ರಂದನ ಮುಗಿಲು ಮುಟ್ಟಿದೆ.

ಶನಿವಾರ ಯರವಾರ ಗ್ರಾಮದಲ್ಲಿ ಸರ್ಕಾರಿ ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

- Advertisement -

Related news

error: Content is protected !!