Monday, August 31, 2026
spot_imgspot_img
spot_imgspot_img

ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ; ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

- Advertisement -
- Advertisement -

ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕೈತಪ್ಪಿರುವ ಸಚಿವ ಸ್ಥಾನವನ್ನು ಮರಳಿ ಗಳಿಸಲು ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಸರ್ವಪ್ರಯತ್ನ ನಡೆಸಿರವ ಬೆನ್ನಿಗೇ ಪ್ರಕರಣವೇ ಎಲ್ಲಿ ಕೈತಪ್ಪುತ್ತದೋ ಎಂದು ಆತಂಕಗೊಂಡಿರುವ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನೇರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ​

ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣದಲ್ಲಿ ಎಸ್ಐಟಿ ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸಲು ಕಳೆದ ವಾರ (ಫೆಬ್ರವರಿ 3) ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ ಬಾಧಿತ ಯುವತಿ ಈ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್ ಪ್ರಕರಣವನ್ನು ಸೋಮವಾರ ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ದಿನ ಪ್ರಕರಣ ಕೈಗೆತ್ತಿಕೊಳ್ಳುವ ಅಂದಾಜಿದೆ.

vtv vitla
vtv vitla
- Advertisement -

Related news

error: Content is protected !!