Tuesday, September 1, 2026
spot_imgspot_img
spot_imgspot_img

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳಿಂದ ಅಟ್ಯಾಕ್!

- Advertisement -
- Advertisement -

ದೇವನಹಳ್ಳಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.

16 ವರ್ಷದ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ 6 ಕ್ಕೂ ಅಧಿಕ ನಾಯಿಗಳು ಏಕಾಏಕಿ ಬಾಲಕಿ ಮೇಲೆ ದಾಳಿ ಮಾಡಿವೆ. ಸ್ಥಳೀಯರ ನೆರವಿನಿಂದ ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಗಾಯಗೊಂಡ ಬಾಲಕಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾಳೆ. ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿವೆ ಎಂದು ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

driving
- Advertisement -

Related news

error: Content is protected !!