Sunday, August 30, 2026
spot_imgspot_img
spot_imgspot_img

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ; ಅರಗ ಜ್ಞಾನೇಂದ್ರ

- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಬೇರೆ ಸಮಯದಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆದಿರಬೇಕು ಎಂದರು.

ಇನ್ನು 15 ದಿನದಲ್ಲಿ ಅನುಮತಿ ಪಡೆಯದಿದ್ದರೆ ಚರ್ಚ್, ಮಸೀದಿ, ದೇವಾಲಯ ಎಂಬ ತಾರತಮ್ಯವಿಲ್ಲದೆ ಧ್ವನಿವರ್ಧಕ ಕಿತ್ತು ಹಾಕಲಾಗುವುದು. ಶಬ್ದ ಮಾಲಿನ್ಯ ನಿಯಂತ್ರಣ ಕಾನೂನಿನ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಧ್ವನಿವರ್ಧಕ ಬಳಕೆಗೆ ಸುಪ್ರೀಂಕೋರ್ಟ್ ಆದೇಶದ ಅನ್ವಯ ಸ್ಪಷ್ಟ ಮಾರ್ಗಸೂಚಿ ಪ್ರಕಟಿಸಿದ್ದು, ಮಾರ್ಗಸೂಚಿ ಉಲ್ಲಂಘಿಸಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!