- Advertisement -




- Advertisement -
ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ಅಧ್ಯ ಕ್ಷ ಶ್ರೀನಿವಾಸ್ ಬಿ ವಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ತಾರತಮ್ಯ ಆರೋಪದಡಿ ಎಫ್ಐಆರ್ ದಾಖಲಾಗಿದ್ದು, ಇದೀಗ ಬಂಧನದ ಭೀತಿ ಎದುರಿಸುತ್ತಿದ್ದಾರೆ.

ಕಳೆದ 6 ತಿಂಗಳಿಂದ ಶ್ರೀನಿವಾಸ್ ಬಿ ವಿ ಕಿರುಕುಳ ನೀಡುತ್ತಿದ್ದಾರೆ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಯುವ ಘಟಕದ ಮುಖ್ಯಸ್ಥೆ ಅಂಗಿತಾ ದತ್ತಾ ಗಂಭೀರವಾಗಿ ಆರೋಪಿಸಿ ದೂರು ದಾಖಲಿಸಿದ್ದರು.
ಅಸ್ಸಾಂ ಪೊಲೀಸರು ನೀಡಿದ ಮಾಹಿತಿ ಪ್ರಕಾರ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 509 294 341 352 354 354A 4 ಮತ್ತು 506 IPC RW ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಗಾಗಿ ಪೊಲೀಸರ ತಂಡ ಕರ್ನಾಟಕಕ್ಕೆ ಬಂದಿದ್ದು ಈ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ ಬಿ ವಿ ಅವರನ್ನು ಬಂಧಿಸುವ ಸಾಧ್ಯತೆಯಿದೆ.
- Advertisement -