Monday, August 31, 2026
spot_imgspot_img
spot_imgspot_img

ವರ್ಷದ ಕೊನೆಯ ದಿನ ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳಿಂದ ಘೋಷಣೆ

- Advertisement -
- Advertisement -
vtv vitla

ಬೆಂಗಳೂರು: ಎಂ.ಇ.ಎಸ್ ದಬ್ಬಾಳಿಕೆ, ದೌರ್ಜನ್ಯ ಹಿನ್ನೆಲೆಯಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ನಿರ್ಧಾರ ಮಾಡಿವೆ.

ಎಂಇಎಸ್ ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮುಂದಿನ ಹೋರಾಟದ ಬಗ್ಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿಂದು ಮಹತ್ವದ ಸಭೆ ನಡೆದಿದ್ದು ಸಭೆಯಲ್ಲಿ ಕರ್ನಾಟಕ ಬಂದ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

vtv vitla

ಎಂಇಎಸ್​ ದಬ್ಬಾಳಿಕೆ, ದೌರ್ಜನ್ಯ ಖಂಡಿಸಿ ವಿವಿಧ ಸಂಘಟನೆಗಳಿಂದ ಡಿ.31ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಮಾಡಲಾಗುತ್ತೆ. ಬೆಂಗಳೂರು ಟೌನ್ ಹಾಲ್​ನಿಂದ ಕನ್ನಡಿಗರ ಶಕ್ತಿ ಪ್ರದರ್ಶನಗೊಳ್ಳಲಿದೆ ಎಂದು ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ​ ಮಾಡಿದ್ದಾರೆ.

ಇಲ್ಲಿ ಯಾವುದೇ ನೈತಿಕ ಬೆಂಬಲ ಅನ್ನೋದು ಬೇಡ. ಎಲ್ಲರೂ ಒಟ್ಟಾಗಿ ಕರ್ನಾಟಕ ಬಂದ್‌ಗೆ ಬೆಂಬಲಿಸಬೇಕು. ಇಡೀ ರಾಜ್ಯವೇ ಒಂದಾಗಬೇಕು. ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಕಡೆ ಬಂದ್ ಆಗಬೇಕು. ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕ ಬಂದ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

vtv vitla
vtv vitla

ಕರ್ನಾಟಕದಲ್ಲಿ ಸರ್ಕಾರ, ಪೊಲೀಸರು ಇದ್ದಾರೆಯೇ? 70 ವರ್ಷದಿಂದ ಎಂಇಎಸ್​ನವರಿಂದ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ರಾಜ್ಯದಲ್ಲಿ ಕನ್ನಡ ಉಳಿದಿದ್ರೆ ಕನ್ನಡ ಪರ ಹೋರಾಟಗಾರರಿಂದ ಮಾತ್ರ. ಉದ್ಧವ್ ಠಾಕ್ರೆ ಸರ್ಕಾರವನ್ನು ರಾಷ್ಟ್ರಪತಿ ವಜಾ ಮಾಡಬೇಕು.

ಉದ್ಧವ್ ಠಾಕ್ರೆ ದಬ್ಬಾಳಿಕೆ ನಮ್ಮ ರಾಜ್ಯದಲ್ಲಿ ನಡೆಯಲ್ಲ. ರಾಜ್ಯದಲ್ಲಿ ಎಂಇಎಸ್​ ನಿಷೇಧ ಮಾಡಲೇಬೇಕು. ಬೆಳಗಾವಿಯ ರಾಜಕಾರಣಿಗಳೇ ಇವರ ಏಜೆಂಟ್. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟರೆ ಕನ್ನಡಿಗರಿಗೆ ಬೆಂಕಿ ಇಟ್ಟ ಹಾಗೆ ಎಂದು ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ಹೊರ ಹಾಕಿದ್ದಾರೆ.

- Advertisement -

Related news

error: Content is protected !!