Wednesday, September 2, 2026
spot_imgspot_img
spot_imgspot_img

ವಾಹನ ದರೋಡೆ: ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ ಮೂವರ ಬಂಧನ

- Advertisement -
- Advertisement -

ಬೆಂಗಳೂರು: ಎಟಿಎಂ ಕೇಂದ್ರಗಳಿಗೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ (CIS) ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹7.11 ಕೋಟಿ ದರೋಡೆ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ನಡೆದ ಕೇವಲ 51 ಗಂಟೆಗಳಲ್ಲೇ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು. ಅವರಿಂದ ₹5.76 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ಸಿಎಂಎಸ್ ವಾಹನ ನಿರ್ವಹಣೆ ಮಾಡುತ್ತಿದ್ದ ಹಾಲಿ ನೌಕರ, ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಸಿಎಂಎಸ್ ಕಂಪನಿಯ ಮಾಜಿ ನೌಕರ ಸೇರಿದ್ದಾರೆ ಎಂಬುದು ತನಿಖೆಯಿಂದ ದೃಢಪಟ್ಟಿದೆ.


ಸುಮಾರು 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಆರೋಪಿಗಳು ಕಳೆದ ಮೂರು ತಿಂಗಳಿಂದ ದರೋಡೆಗೆ ಸಂಚು ರೂಪಿಸಿದ್ದು, ಕೃತ್ಯ ಎಸಗುವ 15 ದಿನಗಳ ಮುನ್ನ ಆ ಪ್ರದೇಶದಲ್ಲಿ ಓಡಾಟ ನಡೆಸಿ ಪರಿಶೀಲನೆ ನಡೆಸಿದ್ದರು ಎಂದು ತಿಳಿದುಬಂದಿದೆ.


ಐದು ಲಕ್ಷ ಬಹುಮಾನ ಘೋಷಣೆ:
ತ್ವರಿತವಾಗಿ ಪ್ರಕರಣ ಭೇದಿಸಿದ ತನಿಖಾ ತಂಡ ಹಾಗೂ ಸಿಬ್ಬಂದಿಗೆ ನಗರ ಪೊಲೀಸ್‌ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅವರು ₹5 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ 5 ರಾಜ್ಯಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!