Saturday, June 28, 2025
spot_imgspot_img
spot_imgspot_img

ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ದಾರುಣ ಸಾವು

- Advertisement -
- Advertisement -

ವಿಟ್ಲ: ಓವರ್‌ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್‌ಗೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ಅಪಘಾತ ಸಂಭವಿಸಿತ್ತು.

ಅಪಘಾತದಲ್ಲಿ ಗಾಯಗೊಂಡಿದ್ದ ಅಲಂಗಾರ್‌ ನಿವಾಸಿ ದಿನೇಶ್(40) ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಆರಂಭದಲ್ಲಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಅವರು ಓವರ್ ಟೇಕ್ ಮಾಡುವ ಭರದಲ್ಲಿ ಜೀಪ್ ಗೆ ಢಿಕ್ಕಿ ಹೊಡೆದಿತ್ತು.

ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

vtv vitla
- Advertisement -

Related news

error: Content is protected !!