Thursday, July 23, 2026
spot_imgspot_img
spot_imgspot_img

ವಿಟ್ಲ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

- Advertisement -
- Advertisement -

ವಿಟ್ಲ: ನೆಲ್ಲ ಮುತ್ತೂರು ಗ್ರಾಮದ ಪರ್ಲೋಟ್ಟು ಎಂಬಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.

ನೆಟ್ಲಮುಡೂರು ಗ್ರಾಮದ ಪರ್ಲೊಟ್ಟು ನಿವಾಸಿ ಶಿವಪ್ಪ ಗೌಡರ ಪುತ್ರ ಜಯಗೌಡ(೪೭) ಮೃತದುರ್ದೈವಿ.

vtv vitla

ಏ.9ರಂದು ರಾತ್ರಿ ಪರ್ಲೊಟ್ಟು ಸಮೀಪ ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಜಯಗೌಡರವರು ರಸ್ತೆ ಬದಿಯಲ್ಲಿ ಬಿದ್ದಿದ್ದರು. ಮುಖ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದ್ದ ಅವರನ್ನು ಕೂಡಲೇ ಸ್ಥಳೀಯರು ಮಂಗಳೂರಿನ ವೆಸ್ಲಾಕ್ ಆಸ್ಪ ದಾಖಲು ಮಾಡಿದರು. ಅಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಏ.೧೦ರಂದು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೊಪ್ಪರಿಗೆ ನಿವಾಸಿ ಸಚ್ಚಿದಾನಂದ ರವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!