Monday, August 3, 2026
spot_imgspot_img
spot_imgspot_img

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ತೋಟಕ್ಕೆ ಬಿದ್ದ ಆಟೋ ರಿಕ್ಷಾ..!

- Advertisement -
- Advertisement -

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು 50 ಅಡಿ ಆಳದ ತೋಟಕ್ಕೆ ಬಿದ್ದು ಜಖಂ ಗೊಂಡ ಘಟನೆ ವೀರಕಂಬದ ಬಳಿ ನಡೆದಿದೆ.

ಕಲ್ಲಡ್ಕದಿಂದ ವಿಟ್ಲ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾವೊಂದು 50 ಅಡಿ ಆಳದ ತೋಟಕ್ಕೆ ಬಿದ್ದು ಆಟೋ ಸಂಪೂರ್ಣ ಜಖಂ ಗೊಂಡಿದ್ದು, ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಹಾಗೂ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಆಟೋ ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

driving
- Advertisement -

Related news

error: Content is protected !!