Thursday, October 10, 2024
spot_imgspot_img
spot_imgspot_img

ಜಾತ್ರೋತ್ಸವದಲ್ಲಿ ಹಲ್ಲೆ ಪ್ರಕರಣ; ಪ್ರಮುಖ ಆರೋಪಿಯ ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರು

- Advertisement -
- Advertisement -
vtv vitla

ವಿಟ್ಲ: ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಣೇಶ್‌ ಕಡಂಬುನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಈತನು ರೌಡಿಶೀಟರ್‌ ಆಗಿದ್ದು, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಈ ಪ್ರಕರಣದ ಉಳಿದ ಐದು ಆರೋಪಿಗಳು ತಲೆಮರೆಸಿಕೊಂಡಿದ್ದು , ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದರು. ರಾತ್ರಿ 12.30ಕ್ಕೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರು ಬಂದು ಅಂಗಡಿ ಏಕೆ ಬಂದ್‌ ಮಾಡುತ್ತಿಯಾ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರು ನೀಡಲಾಗಿದೆ.

- Advertisement -

Related news

error: Content is protected !!