- Advertisement -



- Advertisement -


ವಿಟ್ಲ: ಖಿನ್ನತೆಗೆ ಒಳಗಾದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೊಳ್ನಾಡು ಗ್ರಾಮದ ತೋಡ್ಲ ನಿವಾಸಿ ದಿ.ಕರುಣಾಕರ ಪೂಜಾರಿಯವರ ಪತ್ನಿ ಶಾಲಿನಿ(38)ಆತ್ಮಹತ್ಯೆ ಮಾಡಿಕೊಂಡವರು. ಕೆಲ ವರ್ಷಗಳ ಹಿಂದೆ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಳಿಕ ಖಿನ್ನತೆಗೆ ಒಳಗಾಗಿದ್ದರೆಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಮನೆಯಲ್ಲಿ ತೀವ್ರ ಅಸ್ವಸ್ಥರಾಗಿದ್ದ ಶಾಲಿನಿಯವರನ್ನು ಸಂಬಂಧಿಕರು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದು ಯಾವುದೋ ಮಾತ್ರೆಗಳನ್ನು ತಿಂದು ಆತ್ಮಹತ್ಯೆಗೆ ಮುಂದಾಗಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.
ಮೃತರು ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -