Thursday, February 2, 2023
spot_imgspot_img
spot_imgspot_img

ವಿಟ್ಲ: (ಜ. 1) ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ನಿ. (ಲ್ಯಾಂಪ್ಸ್) ನೂತನವಾಗಿ ನಿರ್ಮಿಸಿರುವ ಕಟ್ಟಡದ ಉದ್ಘಾಟನಾ ಸಮಾರಂಭ

- Advertisement -G L Acharya G L Acharya
- Advertisement -

ವಿಟ್ಲ: ದ.ಕ ಜಿಲ್ಲೆ ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ನಿ. (ಲ್ಯಾಂಪ್ಸ್)ವು ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುದ್ದುಪದವು ಶಾಖೆಗೆ ನೂತನವಾಗಿ ನಿರ್ಮಿಸಿರುವ ಕಟ್ಟಡದ ಉದ್ಘಾಟನಾ ಸಮಾರಂಭವು 01.01.2023ನೇ ಭಾನುವಾರ ಸಮಯ ಬೆಳಗ್ಗೆ 11.00 ಗಂಟೆಗೆ ಕೇಪು ಗ್ರಾಮದ ಕುದ್ದುಪದವು ಎಂಬಲ್ಲಿ ನಡೆಯಲಿದೆ.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸಂಘದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಸಮಾರಂಭದ ಅಧ್ಯಕ್ಷತೆ ಹಾಗೂ ಬ್ಯಾಂಕಿಂಗ್ ವಿಭಾಗದ ಉದ್ಘಾಟನೆ ನಡೆಸಲಿದ್ದಾರೆ. ದ.ಕ. ಜಿಲ್ಲಾ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಟೈಲರಿಂಗ್ ಘಟಕ ಉದ್ಘಾಟಿಸಲಿದ್ದಾರೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾೖಕ್‌ ಉಳಿಪಾಡಿ ಗುತ್ತು ಭದ್ರಾ ಕೊಠಡಿ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಧಾನ ಸಭಾ ಕ್ಷೇತ್ರ ಶಾಸಕ ಯು. ಟಿ. ಖಾದರ್ ವ್ಯಾಪಾರ ಮಳಿಗೆ ಉದ್ಘಾಟಿಸಲಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಳಿ ನಿ. ಮೈಸೂರು ಇದರ ಅಧ್ಯಕ್ಷ ಮುತ್ತಪ್ಪ, ಉಪಾಧ್ಯಕ್ಷ ಮಂಜುನಾಥ್ ಎನ್.ಎಸ್, ಕೇಪು ಗ್ರಾ.ಪಂ. ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್ ರಮೇಶ್, ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್‍ ಜೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!