Thursday, February 2, 2023
spot_imgspot_img
spot_imgspot_img

ವಿಟ್ಲ: (ಜ.5) ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನವೀಕರಣ ವಾರ್ಷಿಕೋತ್ಸವದ ಪ್ರಯುಕ್ತ ಚಂಡಿಕಾಯಾಗ

- Advertisement -G L Acharya G L Acharya
- Advertisement -

ವಿಟ್ಲ: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನೀಲೇಶ್ವರ ಉಚ್ಚಿಲತ್ತಾಯ ವೇದಮೂರ್ತಿ ಶ್ರೀ ಪದ್ಮನಾಥ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ವಾರ್ಷಿಕೋತ್ಸವದ ಪ್ರಯುಕ್ತ ಚಂಡಿಕಾಯಾಗವು ಜ.5 ರಂದು ನಡೆಯಲಿದೆ.

ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳಾದ ಪುಣ್ಯಾಹ, ಗಣಪತಿ ಹವನ, ನವಗ್ರಹಶಾಂತಿ, ಕಲಶಗಳು, ಚಂಡಿಕಾಯಾಗ ಪ್ರಾರಂಭಗೊಳ್ಳಲಿದೆ. ಬಳಿಕ ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ನಂತರ ತಂಬಿಲ, ಚಂಡಿಕಾ ಯಾಗದ ಪೂರ್ಣಾಹುತಿ, ಮಧ್ಯಾಹ್ನ ಹೂವಿನ ಪೂಜೆ ಹಾಗೂ ಮಹಾಮಂಗಳಾರತಿ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ದಿನಾಂಕ 14-2-2023ನೇ ಮಂಗಳವಾರ ಕಾಲಾವಧಿ ಮೆಚ್ಚಿ ಜಾತ್ರೆ ಜರಗಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!