Thursday, July 30, 2026
spot_imgspot_img
spot_imgspot_img

ವಿಟ್ಲ: ಪಕ್ಷ ವಿರೋಧಿ ಚಟುವಟಿಕೆ ಆರೋಪ- ಕಾಂಗ್ರೆಸ್ ಮುಖಂಡ ರಾಜೇಶ್ ಬಾಳೆಕಲ್ಲು ಪಕ್ಷದಿಂದ ಉಚ್ಚಾಟನೆ!

- Advertisement -
- Advertisement -

ವಿಟ್ಲ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಮಾಜಿ ಅಧ್ಯಕ್ಷ, ಹಾಲಿ ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ರಾಜೇಶ ಬಾಳೆಕಲ್ಲು ಕೆಲ ಸಮಯಗಳಿಂದ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಾ ಬಂದಿದ್ದು, ಬ್ಲಾಕ್ ಕಾಂಗ್ರೆಸ್ ಸಮಿತಿ ವಿಟ್ಲ ಹಾಗೂ ಕಾರ್ಯಕರ್ತರು ದೂರಿಕೊಂಡಿದ್ದರು.

ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿರುವುದಾಗಿಯೂ ಹಾಗೂ ಪಕ್ಷದ ನಾಯಕರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಈ ವಿಚಾರವಾಗಿ ಪರಿಶೀಲಿಸಲಾಗಿ ಬ್ಲಾಕ್ ಕಾಂಗ್ರೆಸ್ ದೂರಿನಲ್ಲಿ ಸತ್ಯಾಸತ್ಯತೆ ಇದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದು ಸಾಬೀತಾಗಿರುತ್ತದೆ.

ಆದುದರಿಂದ ರಾಜೇಶ ಬಾಳೆಕಲ್ಲು ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

driving
- Advertisement -

Related news

error: Content is protected !!