

ವಿಟ್ಲ: ಬಜರಂಗದಳ ವಿಟ್ಲ ಪ್ರಖಂಡದ ಸಂಚಾಲಕ ಚಂದ್ರಹಾಸ ಕನ್ಯಾನ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಈಗ ಹಲ್ಲೆಗೈದ ತಂಡವೂ ವಿಟ್ಲ ಪೊಲೀಸ್ ಠಾಣಾ ಮೆಟ್ಟಿಲೇರಿದೆ. ಸಾಲೆತ್ತೂರು ಗ್ರಾಮದ ಅಗರಿ ಎಂಬಲ್ಲಿ
ಕೃತ್ಯ ನಡೆದಿತ್ತು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿತ್ತು. ಈಗ ಚಂದ್ರಹಾಸ ಕನ್ಯಾನ ಅವರಿಗೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ತಂಡ ದೂರು ನೀಡಿದೆ. ಸುರತ್ಕಲ್ ನಿವಾಸಿಯಾಗಿರುವ ಪ್ರಶಾಂತ ಅಲಿಯಾಸ್ ಪಚ್ಚು ಪ್ರತಿ ದೂರು ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮತ್ತೊಂದು ತಂಡ 13 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಈಗ ಪ್ರಶಾಂತ್ ಅವರ ತಂಡ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದೆ. ಚಂದ್ರಹಾಸ, ನಾಗೆಶ್, ದೇವದಾಸ ಹಾಗೂ ಇತರ 03 ಜನರ ವಿರುದ್ಧ ಕೇಸ್ ದಾಖಲಾಗಿದೆ.

ದೂರಿನಲ್ಲಿ ಏನಿದೆ..?
ದೂರುದಾರರು ಆಪ್ತ ಹುಡುಗರ ಮದ್ಯೆ ಇದ್ದ ವೈಮನಸ್ಸಿನ ಬಗ್ಗೆ ಮಾತನಾಡಲು ಬಂಟ್ವಾಳ ತಾಲೂಕು ಸಾಲೆತ್ತೂರು ಗ್ರಾಮದ ನಾಗೇಶ್‌ರವರ ಮನೆಯ ಬಳಿ ಹೋಗಿದ್ದಾರೆ. ನಾಗೇಶ್, ಚಂದ್ರಹಾಸ, ದೇವದಾಸರವರೊಂದಿಗೆ ಮಾತನಾಡುತ್ತಿರುವಾಗ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಪ್ರಶಾಂತ್ (ದೂರುದಾರರು) ಎಂಬವರನ್ನು ಕೊಲೆ ಮಾಡುವ ಉದ್ದೇಶದಿಂದ ದೇವದಾಸ ಎಂಬಾತ ಹಿಂದಿನಿಂದ ಬಿಗಿಯಾಗಿ ಹಿಡಿದುಕೊಂಡು ಚಂದ್ರಹಾಸ ಕನ್ಯಾನ ಚಾಕುವಿನಿಂದ ಪ್ರಶಾಂತ್ ಎಂಬಾತನ ಹೊಟ್ಟೆಯ ಭಾಗಕ್ಕೆ ಮತ್ತು ಕುತ್ತಿಗೆಗೆ ಚುಚ್ಚಿದ್ದಾನೆ. ಅದೇ ವೇಳೆ ಮತ್ತೊಬ್ಬ ಚಾಕುವಿನಿಂದ ಪ್ರಶಾಂತ್ ಎಂಬಾತನ ಬೆನ್ನಿಗೆ ಚುಚ್ಚಿದ್ದಾನೆ. ಬಳಿಕ ಹಲ್ಲೆಗೈದು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಜೀವ ಬೆದರಿಕೆ ಹಾಕಿ ಹೊರಟು ಹೋಗಿರುತ್ತಾರೆ ಎಂದು ಪ್ರಶಾಂತ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಲ್ಲೆಯಿಂದ ಗಾಯಗೊಂಡ ಪಿರ್ಯಾಧಿದಾರರನ್ನು ಅಪರಿಚ ವ್ಯಕ್ತಿ ಚಿಕಿತ್ಸೆಯ ಬಗ್ಗೆ ಪುತ್ತೂರು ಪ್ರಗತಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪರಿಕ್ಷೀಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮೇಲ್ದರ್ಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದಂತೆ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಪರಿಕ್ಷೀಸಿ ಒಳರೋಗಿಯಾಗಿ ದಾಖಲಿಸಿಕೊಂಡಿರುತ್ತಾರೆ. ಪ್ರಶಾಂತ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
- ವ್ಯಾಪ್ತಿಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತರರಾಜ್ಯ ಕಳ್ಳರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ
- ಅಕ್ರಮ ಗೋಹತ್ಯಾ ಪ್ರಕರಣ, ಮನೆ, ಕೊಟ್ಟಿಗೆ ಸೇರಿದಂತೆ ಕೃತ್ಯ ನಡೆದ ಸ್ಥಳದ ಜಪ್ತಿ
- ದಿ.ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈ.ಲಿ ಸಹಕಾರದಲ್ಲಿ ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ನೆಟ್ಟಾರು-ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ
- ಪೋಕ್ಸೋ ಕೇಸ್; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್
- ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ–ಖ್ಯಾತ ಯೂಟ್ಯೂಬರ್ ಮರಿದಾಸ್ ಪೊಲೀಸ್ ವಶಕ್ಕೆ!










