



ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ವಿಟ್ಲ ಮಹಾಶಕ್ತಿ ಕೇಂದ್ರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿಠಲ ಪ್ರೌಢ ಶಾಲೆಯ ಮಾಜಿ ಉಪಪ್ರಾಂಶುಪಾಲ ಹೆಚ್ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ವೀಕ್ಷಣೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಪುತ್ತೂರು ವಿಧಾನಸಭಾ ಶಾಸಕ ಸಂಜೀವ ಮಠಂದೂರು ಹಾಗೂ ಕರಾವಳಿ ಪ್ರಾಧಿಕಾರ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ವಾಹನಗಳಿಗೆ ಸ್ಟಿಕರ್ ಹಾಕುವ ಮೂಲಕ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ವಿಟ್ಲ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಅರುಣ್ ವಿಟ್ಲ, ಕಾರ್ಯದರ್ಶಿ ಕರುಣಾಕರ ಗೌಡ ನಾಯ್ತೋಟು, ಹಿಂದೂ ಸಂಘಟನೆ ಪ್ರಮುಖ್ ಅಕ್ಷಯ ರಜಪೂತ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಗೌಡ ಮುಂಗ್ಲಿಮನೆ, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಆರ್ ಸಿ ನಾರಾಯಣ್, ಪುಣಚ ಶಕ್ತಿ ಕೇಂದ್ರ ಅಧ್ಯಕ್ಷ ಹರಿಪ್ರಸಾದ್ ಯಾದವ್, ಗ್ರಾಮಾಂತರ ಮಂಡಲ ಕಾರ್ಯದರ್ಶಿ ನಿತೇಶ್ ಶಾಂತಿವನ, ಜಿಲ್ಲಾ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಹರೀಶ್ ಬಿಜತ್ರೆ, ದ.ಕ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ ನೆಕ್ಕರೆ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ನಾರಾಯಣ ಮುಳಿಯ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನೀತ್ ಮಾಡತ್ತಾರ್, ಪಕ್ಷದ ಹಿರಿಯ ಕಾರ್ಯಕರ್ತರಾದ ನಿತ್ಯಾನಂದ ನಾಯಕ್, ನಿವೃತ್ತ ಉಪ ಪ್ರಾಂಶುಪಾಲ ಸುಬ್ರಮಣ್ಯ ಭಟ್, ಹಿರಿಯ ವಕೀಲ ಜಯರಾಮ್ ರೈ, ನರ್ಸಪ್ಪ ಪೂಜಾರಿ ನಿಡ್ಯಾ, ಮಹಾಬಲೇಶ್ವರ ಭಟ್ ಅಲಂಗಾರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಭಾರಿ ಮೋಹನ್ ದಾಸ್ ಉಕ್ಕುಡ, ರಾಮದಾಸ್ ಶೆಣೈ ವಿಟ್ಲ, ಜಗದೀಶ್ ಪಾಣೆಮಜಲು, ಜೀವನ್ ವಿಟ್ಲ, ಶಕ್ತಿ ಕೇಂದ್ರ ಅಧ್ಯಕ್ಷರುಗಳಾದ ಲೋಕನಾಥ್ ಶೆಟ್ಟಿ ಕೊಲ್ಯ, ವೀರಪ್ಪ ಗೌಡ ರಾಯರ ಬೆಟ್ಟು, ಹರೀಶ್ ಪೂಜಾರಿ ವಿಟ್ಲ, ಸಾಮಾಜಿಕ ಜಾಲತಾಣ ಸಂಚಾಲಕ ಕೃಷ್ಣ ಮುದೂರು, ಮಹಿಳಾ ಮೋರ್ಚಾ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಪ.ಪಂ ಸದಸ್ಯರುಗಳಾದ ರವೀಶ್ ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ಜಯಂತ್ ಸಿ.ಎಚ್, ವಸಂತ ಪಿ, ಗೋಪಿಕೃಷ್ಣ, ವಿಜಯಲಕ್ಷ್ಮಿ, ಸಂಗೀತ ಜೆ ಪಿ, ರಕ್ಷಿತಾ ಸನತ್, ಸುದರ್ಶನ್, ರಾಕೇಶ್ ಶೆಣೈ ಹಾಗೂ ಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಪ ಪಂ ಸದಸ್ಯರು ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.




