- Advertisement -
- Advertisement -
ವಿಟ್ಲ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಲಮುಡ್ನೂರು ಗ್ರಾಮದ ಏಲ್ಕಾಜೆ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು.
ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -