Monday, April 29, 2024
spot_imgspot_img
spot_imgspot_img

ವಿಟ್ಲ: ಮುಸ್ಲಿಂ ಸಮುದಾಯದ ಮದುವೆ ಸಂಭ್ರಮದಲ್ಲಿ ಕೊರಗಜ್ಜನ ವೇಷ ಧರಿಸಿ ಡಾನ್ಸ್ ಮಾಡಿದ ವರ.? ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ತೀವ್ರ ಖಂಡನೆ

- Advertisement -G L Acharya panikkar
- Advertisement -

ವಿಟ್ಲ: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಮತ್ತೆ ಅವಮಾನ, ಮದುವೆಯ ದಿನ ಕೊರಗಜ್ಜನ ವೇಷಭೂಷಣ ಧರಿಸಿ ಮುಸ್ಲಿಂ ವ್ಯಕ್ತಿ ಕುಣಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ .

ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದೆ. ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಜೊತೆ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿದ್ದು, ಸಾವಿರಾರು ಜನರಿಗೆ ಔತಣ ಕೂಟವನ್ನು ಏರ್ಪಡಿಸಿದ್ದರು. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ (ತಾಳ) ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರ ಆಗಮಿಸಿದ್ದ ಎನ್ನಲಾಗಿದೆ.

ವರ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂತಹ ಕೃತ್ಯವನ್ನೆಸಗಿ ಹಿಂದೂಗಳ ನಂಬಿಕೆಯನ್ನು ಟೀಕಿಸಿದ್ದಾರೆ, ಅಷ್ಟೇ ಅಲ್ಲದೇ ಕೊರಗ ಸಮುದಾಯವನ್ನು ಅವಮಾನಿಸಿದ್ದಾರೆ. ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ತೀವ್ರವಾಗಿ ಖಂಡಿಸುತ್ತದೆ ಈ ಘಟನೆ ಬಗ್ಗೆ ಸ್ವಯಂ ಪ್ರೇರಿತ ಕೇಸು ದಾಖಲಿಸಬೇಕು ಇಲ್ಲದಿದ್ದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

vtv vitla
suvarna gold

- Advertisement -

Related news

error: Content is protected !!