- Advertisement -
- Advertisement -
ವಿಟ್ಲ ಮುಡ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಇದರ ವಿಟ್ಲ ಮುಡ್ನೂರು ಡಿಜಿಟಲ್ ಸೇವಾ ಕೇಂದ್ರ ಕಾಮನ್ ಸೆಂಟರ್ ವಿಟ್ಲ ಮುಡ್ನೂರು ಪಂಚಾಯತ್ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು.
ವಿಟ್ಲ ಮುಡ್ನೂರು ಪಂಚಾಯತ್ ಅಧ್ಯಕ್ಷ ಜಯಪ್ರಕಾಶ್ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಶಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಚೆನ್ನಪ್ಪ ಗೌಡ ಸೇವಾಕೇಂದ್ರದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿಟ್ಲ ವಲಯದ ಮೇಲ್ವಿಚಾರಕ ವಿನೋದ್ ಹಾಗೂ ಅಧ್ಯಕ್ಷರು, ಸೇವಾ ಪ್ರತಿನಿಧಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭವ್ಯ ಪ್ರಾರ್ಥಿಸಿ, ಹರೀಶ್ ಕಾರ್ಯಕ್ರಮ ನಿರೂಪಿಸಿದರು.
- Advertisement -