Sunday, July 26, 2026
spot_imgspot_img
spot_imgspot_img

ವಿಟ್ಲ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗಾ ಅಭಿಯಾನ; ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ರವರ ಮನೆಗೆ ತ್ರಿವರ್ಣ ಧ್ವಜ ಹಸ್ತಾಂತರ

- Advertisement -
- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಿನ್ನೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪುತ್ತೂರು ವಿಧಾನಸಭಾ ಕ್ಷೇತ್ರದ ಕೇಪು ಗ್ರಾಮದ ಅಮೈ ಶ್ರೀ ಮಹಾಲಿಂಗ ನಾಯ್ಕ ಅವರ ಮನೆಗೆ ಭೇಟಿ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ವಕ್ತಾರರಾದ ಶ್ರೀ ಜಗದೀಶ್ ಶೇಣವ, ರಾಜ್ಯ ಮಾಧ್ಯಮ ವಕ್ತಾರರಾದ ಶ್ರೀ ವಿಕಾಸ್ ಪುತ್ತೂರು, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಬೂಡಿಯಾರು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಸ್ತೂರಿ ಪಂಜ, ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕರಾದ ಶ್ರೀ ಸುಧಾಕರ್ ಆಚಾರ್ಯ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಶ್ರೀ ನಿತೀಶ್ ಕುಮಾರ್ ಶಾಂತಿವನ, ಉಪಾಧ್ಯಕ್ಷರಾದ ಶ್ರೀ ಹರಿಪ್ರಸಾದ್ ಯಾದವ್, ಬಿಜೆಪಿ ಪ್ರಮುಖರಾದ ಶ್ರೀ ದಯಾನಂದ ಶೆಟ್ಟಿ ಉಜಿರುಮಾರು, ಶ್ರೀ ಹರೀಶ್ ಬಿಜಾತ್ರೆ, ಶ್ರೀ ಉಮೇಶ್ ಶೆಣೈ, ಶ್ರೀ ರಾಧಾಕೃಷ್ಣ ಶೆಟ್ಟಿ ಕೇಪು, ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶಸ್ವಿನಿ ಶಾಸ್ತ್ರಿ, ಶ್ರೀ ಸುರೇಶ್ ಆಳ್ವ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!