Friday, June 5, 2026
spot_imgspot_img
spot_imgspot_img

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕ ಅಮಾನತು

- Advertisement -
- Advertisement -

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಮಂಜುನಾಥನನ್ನು ಅಮಾನತು ಮಾಡಲಾಗಿದೆ. ಶಿಕ್ಷಕ ಮಂಜುನಾಥ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಗ್ರಾಮಸ್ಥರು ಶಾಲೆಗೆ ನುಗ್ಗಿ ಮಂಜುನಾಥನನ್ನು ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಂಜುನಾಥನ ಕಾಮಚೇಷ್ಟೆ‌ ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಹಾಗೂ ಬುಡವನಹಳ್ಳಿ ಪೊಲೀಸ್​ ಇನ್ಸ್​ಪೆಕ್ಟರ್​ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಅವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದಾರೆ. ಇದೀಗ ಬಿಇಒ, ಶಿಕ್ಷಕ ಮಂಜುನಾಥನನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

Related news

error: Content is protected !!