- Advertisement -
- Advertisement -



ವಿರಾಜಪೇಟೆ: ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ನಡೆದಿದೆ. ನಾoಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಕೊಲೆಯಾದ ಯುವತಿ.
ಈಕೆಯ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಿಂದ ಹೊರಗೆ ಕರೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -