Saturday, June 6, 2026
spot_imgspot_img
spot_imgspot_img

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತಾದಿಗಳಿಗೆ ಹೊಸ ರೂಲ್ಸ್‌ ; ನದಿ ಸ್ನಾನದ ವೇಳೆ ಸೋಪು ಶ್ಯಾಂಪು ಬಳಕೆ ನಿಷೇಧ

- Advertisement -
- Advertisement -
vtv vitla

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಭಕ್ತಾದಿಗಳು ಆಗಮಿಸುತ್ತಿದ್ದು, ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಮಹತ್ವದ ಆದೇಶವೊಂದು ಹೊರಡಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಹೀಗಾಗಿ ಭಕ್ತಾದಿಗಳು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವಾಗ ಶ್ಯಾಂಪೂ ಅಥವಾ ಸೋಪು ಇನ್ನಿತರ ವಸ್ತುಗಳ ಉಪಯೋಗವನ್ನು ನಿಷೇಧ ಮಾಡಲಾಗಿದೆ.

ಅಷ್ಟೇ ಅಲ್ಲದೇ ಧರ್ಮಸ್ಥಳ ಗ್ರಾಮ ಪಂಚಾಯತ್, ನೇತ್ರಾವತಿ ಸ್ನಾನಘಟ್ಟ, ನೇತ್ರಾನಗರ, ಹರಿಕೆಮಂಡೆಯ ಸುತ್ತಮುತ್ತಲಿನ ಅಂಗಡಿಗಳಲ್ಲಿ ಶ್ಯಾಂಪೂ ಅಥವಾ ಸೋಪು ಮಾರದಂತೆ ಅಧಿಕೃತ ಸೂಚನೆ ಯನ್ನು ನೀಡಲಾಗಿದೆ. ಭಕ್ತಾಧಿಗಳು ಸ್ವಚ್ಟತೆಯನ್ನು ಕಾಪಾಡುವ ದೃಷ್ಟಿಯಿಂದ ಈ ರೂಲ್ಸ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಸೂಚನೆ ನೀಡಲಾಗುತ್ತಿದೆ.

- Advertisement -

Related news

error: Content is protected !!