Friday, October 2, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಹವ್ಯಾಸಿ ಯಕ್ಷಗಾನ ಭಾಗವತರು ಸ್ಥಳದಲ್ಲೇ ಸಾವು!

- Advertisement -
- Advertisement -

ಸುಬ್ರಹ್ಮಣ್ಯ: ಚಲಿಸುತ್ತಿದ ಬೈಕ್ ಮೇಲೆ ಕಡವೆ ಜಿಗಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಶನಿವಾರ ಸಂಭವಿಸಿದೆ.

ಮೃತರು ರಾಮಚಂದ್ರ ಅರ್ಬಿತ್ತಾಯ (50) ಎನ್ನಲಾಗಿದೆ. ಅವರು ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬ ರಸ್ತೆಯಲ್ಲಿ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಕಡವೆಗೆ ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಟಲ್ ಆಡಿ ತನ್ನ ಮನೆಗೆ ವಾಪಾಸಾಗುತ್ತಿದ್ದ ಸಮಯದಲ್ಲಿ ಘಟನೆ ನಡೆದಿದ್ದು, ಸಹಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!