Monday, May 20, 2024
spot_imgspot_img
spot_imgspot_img

ಸುಳ್ಯ : ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮಗಳು

- Advertisement -G L Acharya panikkar
- Advertisement -

ಸುಳ್ಯ : ತಾಯಿ ಮತ್ತು ಮಗಳು ಒಟ್ಟಿಗೆ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಫಲಿತಾಂಶಕ್ಕೆ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಸುಳ್ಯದಲ್ಲಿ ಸಾಕ್ಷಿಯಾಗಿದೆ.

ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಶಾ ಒಟ್ಟಿಗೆ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಸುಳ್ಯದ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆಯೂ ಅಧ್ಯಯನ ನಡೆಸಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದು 45ನೇ ವರ್ಷದಲ್ಲಿ ಪಿಯುಸಿ ಪರೀಕ್ಷೆ ಉತ್ತೀರ್ಣರಾಗಿದ್ದಾರೆ.

ಮಗಳು ತ್ರಿಶಾ ಸುಳ್ಯದ ಜೂನಿಯರ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಓದಿ ಪರೀಕ್ಷೆ ಬರೆದು ಪಾಸಾಗಿದ್ದಾರೆ. 25 ವರ್ಷದ ಹಿಂದೆ ಗೀತಾ ಅವರ ಹೈಸ್ಕೂಲ್ ವಿದ್ಯಾಭ್ಯಾಸ ಮೊಟಕುಗೊಂಡಿತ್ತು. ಎರಡು ವರ್ಷಗಳ ಹಿಂದೆ ಇವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಉತ್ತೀರ್ಣಗೊಂಡಿದ್ದರು. ಈ ವರ್ಷ ಪಿಯುಸಿ ಪರೀಕ್ಷೆಯನ್ನು ಸುಳ್ಯದ ಜೂನಿಯರ್ ಕಾಲೇಜಿನಲ್ಲಿ ಬರೆದಿದ್ದರು.

ಗೃಹ ರಕ್ಷಕ ದಳದ ಸಿಬ್ಬಂದಿಯಾಗಿರುವ ಇವರು ಕರ್ತವ್ಯ, ಮನೆಗೆಲಸದ ಬಿಡುವಿನ ವೇಳೆ ತನ್ನ ವಿದ್ಯಾಭ್ಯಾಸ ನಡೆಸಿದ್ದಾರೆ. ಅಲ್ಲದೆ ಇವರ ಕಲಿಕೆಗೆ ಪೂರಕವಾಗಿ ಕಾಲೇಜಿನ ಉಪನ್ಯಾಸಕರೂ ಪುಸ್ತಕಗಳನ್ನು ನೀಡಿ ಸಹಕರಿಸಿದ್ದಾರೆ. ಅವರಿಗೆ ಗೀತಾ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಈ ಮೂಲಕ ತಾಯಿ ಮತ್ತು ಮಗಳು ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗಿ ಗಮನ ಸೆಳೆದಿದ್ದಾರೆ.

- Advertisement -

Related news

error: Content is protected !!