Thursday, July 23, 2026
spot_imgspot_img
spot_imgspot_img

ಸುಳ್ಯ: ಬಾವಿಗೆ ಬಿದ್ದು ವ್ಯಕ್ತಿ ಸಾವು!

- Advertisement -
- Advertisement -
driving

ಸುಳ್ಯ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯದ ಕನಕಮಜಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಪೆರುಂಬಾರು ನಿವಾಸಿ ಜಯರಾಮ ಗೌಡ(52) ಎನ್ನಲಾಗಿದೆ.

ರಾತ್ರಿ ವೇಳೆ ಜಯರಾಮ ಗೌಡರಿಗೆ ಓಡಾಡುವ ಅಭ್ಯಾಸವಿದ್ದು, ನಿನ್ನೆ ತಡರಾತ್ರಿಯೂ ಮನೆಯಿಂದ ಹೊರಟು ಹೋದವರು ಮನೆಗೆ ಬಾರದೆ ನಾಪತ್ತೆಯಾಗಿದ್ದರು.

ಇಂದು ಮುಂಜಾನೆ ವೇಳೆಗೆ ಹುಡುಕಾಟ ನಡೆಸಿದಾಗ ಅವರ ಮೃತದೇಹ ಕಾರಿಂಜ ಸಿಆರ್ ಸಿ ಕಾಲೊನಿ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ರಾತ್ರಿ ವೇಳೆ ಸಂಚರಿಸುವಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದಿರುವುದಾಗಿ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!