Wednesday, September 23, 2026
spot_imgspot_img
spot_imgspot_img

ಸುಳ್ಯ: ಬೈಕ್ ಹಾಗೂ ಜೀಪು ನಡುವೆ ಭೀಕರ ಅಪಘಾತ: ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ..!

- Advertisement -
- Advertisement -

ಸುಳ್ಯ: ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿ ವಿಶ್ವದೀಪ್ ಎನ್ನಲಾಗಿದೆ.

ಇಂದು ಪರೀಕ್ಷೆ ಮುಗಿಸಿ ಇಬ್ಬರು ವಿದ್ಯಾರ್ಥಿಗಳು ಬೈಕಿನಲ್ಲಿ ಮನೆಗೆ ತೆರಳಿದ್ದ ಸಂದರ್ಭ ಕುಂಬಳಚೇರಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಜೀಪನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ಬೈಕ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಜೀಪಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ವೇಳೆ ತಲೆ ರಸ್ತೆಗೆ ತಾಗಿದ ಕಾರಣ ವಿದ್ಯಾರ್ಥಿ ವಿಶ್ವದೀಪ್ ಸ್ಥಳದಲ್ಲೇ ಮೃತಪಟ್ಟರೆ, ದರ್ಶನ್ ಎಂಬ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ.

ಕೂಡಲೇ ಅವರಿಬ್ಬರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ದರ್ಶನ್ ನನ್ನು ಮಂಗಳೂರಿಗೆ ಕರೆದೊಯ್ಯಲಾಗಿದ್ದು, ವಿಶ್ವ ದೀಪ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!