- Advertisement -
- Advertisement -

ಸುಳ್ಯ: ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಸಂದರ್ಭ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.
ಮಂಗಳೂರಿನ ಮನ್ವಿತ್(12 ವರ್ಷ) ಎಂಬಾತ ಅರಂತೋಡು ಗ್ರಾಮದ ಕುಕ್ಕುಂಬಳ ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಅರಂತೋಡಿನ ದಾಮೋದರ ಶೆಟ್ಟಿಯವರ ಪುತ್ರಿಯನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಗಿದ್ದು, ಅವರ ಮಗ ಮನ್ವಿತ್ ಅಜ್ಜನ ಮನೆಗೆ ಬಂದ ಸಂದರ್ಭ ಹಂಸ ಕುಕ್ಕುಂಬಳರವರ ಮನೆ ಸಮೀಪ ಸ್ನಾನ ಮಾಡಲೆಂದು ನೀರಿಗಿಳಿದು ಮೃತಪಟ್ಟರೆಂದು ತಿಳಿದುಬಂದಿದೆ. ಮೃತದೇಹವನ್ನು ಶರತ್, ನಿಧೀಶ್, ತಾಜ್ ಅರಂತೋಡು, ಮುನೀರ್ ನೀರಿನಿಂದ ಹೊರತೆಗೆಯಲು ಸಹಕರಿಸಿದರು.


- Advertisement -








