Thursday, December 1, 2022
spot_imgspot_img
spot_imgspot_img

ಸುಳ್ಯ: 7 ವರ್ಷದ ಬಾಲಕ ಹೃದಯಾಘಾತದಿಂದಾಗಿ ಮೃತ್ಯು

- Advertisement -G L Acharya G L Acharya
- Advertisement -

ಸುಳ್ಯ: ಹೃದಯಾಘಾತಾದಿಂದಾಗಿ 7ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಕುಂಟಿಕಾನದಲ್ಲಿ ನಡೆದಿದೆ.

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ . ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. (7) ಮೃತ ಬಾಲಕ.

ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನು. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು . ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು , ತತ್‌ಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು , ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು .

ಮೃತ ಬಾಲಕ ತಂದೆ, ತಾಯಿ ಸಹೋದರರನ್ನು ಅಗಲಿದ್ದಾರೆ.

- Advertisement -

Related news

error: Content is protected !!