- Advertisement -
- Advertisement -


ಬೆಂಗಳೂರು: ಪೊಲೀಸರಿಂದ ಕಿರುಕುಳ ಆರೋಪದಲ್ಲಿ ಮಹಿಳೆ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಬಸವನಪುರದಲ್ಲಿ ನಡೆದಿದೆ. ಫ್ಯಾನ್ಗೆ ನೇಣು ಬಿಗಿದುಕೊಂಡು ಉಮಾ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಮಾ ಎಂಬವರು ವೈದ್ಯರೊಬ್ಬರ ಮನೆಯಲ್ಲಿ ಕೆಲಸ ಮಾಡ್ತಿದ್ದರು. ಆ ವೈದ್ಯರ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ ಕಳವಾಗಿತ್ತು. ಈ ಹಿನ್ನೆಲೆ ಹಲವು ಸಲ ಠಾಣೆಗೆ ಕರೆಸಿ ಪೊಲೀಸರಿಂದ ಕಿರುಕುಳ ಮಾಡಿದ ಆರೋಪದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿಯೂ ಮನೆ ಬಳಿ ಬಂದು ಸಾರ್ವಜನಿಕವಾಗಿ ಅಪಮಾನ ಮಾಡಲಾಗಿದೆ. ಸಾರ್ವಜನಿಕವಾಗಿ ಅಪಮಾನಿಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಉಮಾ, ನನ್ನ ಸಾವಿಗೆ ರಮ್ಯಾ, ರೋಹಿತ್ ಕಾರಣವೆಂದು ಹೇಳಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


- Advertisement -








