- Advertisement -
- Advertisement -
ಪಾಲಕ್ಕಾಡ್: ಕೇರಳ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಮಂಬರತ್ ಎಂಬಲ್ಲಿ ಹಾಡಹಗಲೇ ದುಷ್ಕರ್ಮಿಗಳ ತಂಡವೊಂದು ಆರ್‌ಎಸ್ಎಸ್ ಕಾರ್ಯಕರ್ತನನ್ನು ಆತನ ಪತ್ನಿಯ ಎದುರೇ ಮಾರಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಮೃತ ವ್ಯಕ್ತಿ ಎಲಪ್ಪಳ್ಳಿ ನಿವಾಸಿ ಸಜಿತ್ (27) ಎನ್ನಲಾಗಿದೆ. ಸಜೀತ್ ಅವರು ಪತ್ನಿಯೊಂದಿಗೆ ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಾಲ್ವರ ತಂಡ ದಾಳಿ ಮಾಡಿ ಹಲ್ಲೆ ನಡೆಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ
ರಾಜಕೀಯ ದ್ವೇಷವೇ ಈ ಕೊಲೆಗೆ ಕಾರಣ ಎಂದು ಶಂಕೆ ವ್ಯಕ್ತವಾಗಿದೆ. ಈ ಕೊಲೆ ಕೃತ್ಯದಲ್ಲಿ ಎಸ್‌ಡಿಪಿಐಯ ಕೈವಾಡವಿದೆಯೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಹರಿದಾಸ್ ರವರು ಆರೋಪಿಸಿದ್ದಾರೆ.
ಮೃತದೇಹವನ್ನು ಪಾಲಕ್ಕಾಡ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -