Tuesday, December 5, 2023
spot_imgspot_img
spot_imgspot_img

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಕಾಲೇಜು ಅಧ್ಯಕ್ಷನ ಬಂಧನಕ್ಕೆ ಆಗ್ರಹಿಸಿ ABVP ಪ್ರೊಟೆಸ್ಟ್‌

- Advertisement -G L Acharya panikkar
- Advertisement -

ಹುಬ್ಬಳ್ಳಿ : ನಗರದ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಕಾಲೇಜಿನ ಅಧ್ಯಕ್ಷನನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಒತ್ತಾಯಿಸೋ ಮೂಲಕ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲೆಯ ವಿಶ್ವೇಶ್ವರಯ್ಯ ಕಾಲೇಜು ಅಧ್ಯಕ್ಷ ಮತ್ತು ಪ್ರಿನ್ಸಿಪಾಲ್ ಇಬ್ಬರು ವಿದ್ಯಾರ್ಥಿನಿಯರನ್ನು ಅತ್ಯಾಚಾರ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಹಿನ್ನೆಲೆ ಧಾರವಾಡದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾಲೇಜು ಪ್ರಿನ್ಸಿಪಾಲ್ ಮಹಾದೇವ ಕುರವತ್ತಿಗೌಡರ ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣದ ಕುರಿತು ತೀವ್ರ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಕುರುವತ್ತಿಗೌಡ ಎರಡನೇ ಆರೋಪಿಯಾಗಿದ್ದಾರೆ. ಒಂದನೇ ಆರೋಪಿಯಾಗಿರುವ ಬಸವರಾಜ ಯಡವಣ್ಣವರ ಎಸ್ಕೇಪ್ ಆಗಿದ್ದು, ಸದ್ಯ ನೊಂದ ವಿದ್ಯಾರ್ಥಿನಿಯರನ್ನು ವೈದ್ಯಕೀಯ ತಪಾಸಣೆ ನಡೆಸಿದ್ದಾರೆ

ಪ್ರಿನ್ಸಿಪಾಲ್ ಮತ್ತು ಕಾಲೇಜು ಅಧ್ಯಕ್ಷರ ವಿರುದ್ಧ ದೂರು ದಾಖಲಾಗಿದೆ. ಕಾಲೇಜು ವಿದ್ಯಾರ್ಥಿನಿಯರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೇವಸ್ಥಾನಕ್ಕೆ ಹಾಗೂ ಆಸ್ಪತ್ರೆಗೆ ಸೇರಿದಂತೆ ಬೇರೆ-ಬೇರೆ ಪ್ರದೇಶಗಳಿಗೆ ಕರೆದುಕೊಂಡು ಹೋಗುವ ನೆಪದಲ್ಲಿ ನಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸುಮಾರು 10 ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. 4 ವರ್ಷಗಳಿಂದ ಈ ಇಬ್ಬರು ವಿದ್ಯಾರ್ಥಿಗಳ ಮೇಲೆ ನಿರಂತರ ಲೈಂಗಿಕ ಕಿರುಕುಳ ನಡೆದಿದೆ. ವಿದ್ಯಾರ್ಥಿನಿಯರು ಇರುವ ಹಾಸ್ಟೇಲ್‌ಗೆ ತೆರಳಿ ರಾತ್ರಿ 12 ಗಂಟೆವರೆಗೆ ಕಾಲ ಕಳೆಯುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ.

ಕಾಲೇಜು ಅಧ್ಯಕ್ಷ ಬಸವರಾಜ್ ಯಡವಣ್ಣವರ ಹಾಗೂ ಶಿಕ್ಷಕ ಮಹಾದೇವ ಕುರವತ್ತಾಗೌಡ ಮೇಲೆ ಪೋಕ್ಸೋ ಕಾಯ್ದೆಯಡಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಪ್ರಮುಖ ಆರೋಪಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ.

- Advertisement -

Related news

error: Content is protected !!