Sunday, August 30, 2026
spot_imgspot_img
spot_imgspot_img

ಹುಬ್ಬಳ್ಳಿ ಗಲಭೆ ಪ್ರಕರಣ; 60ಕ್ಕೂ ಅಧಿಕ ಮಂದಿ ಅರೆಸ್ಟ್, ಏ.20ರವರೆಗೆ ನಿಷೇಧಾಜ್ಞೆ ಜಾರಿ

- Advertisement -
- Advertisement -

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಿ, 60ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 20ರವರೆಗೆ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಮಕ್ಕಾ ಮಸೀದಿಯ ಮೇಲೆ ಕೇಸರಿ ಧ್ವಜ ಹಾರಿಸಿದಂತ ಎಡಿಟ್ ಪೋಟೋದಿಂದಾಗಿ ರೊಚ್ಚಿಗೆದ್ದಂತ ಮುಸ್ಲೀಂ ಪುಂಡರ ಗುಂಪು, ನಗರದಲ್ಲಿನ ದೇವಸ್ಥಾನ, ಆಸ್ಪತ್ರೆ, ಬಸ್, ಪೊಲೀಸ್ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿ, ಕಳೆದ ರಾತ್ರಿ ಜಖಂ ಗೊಳಿಸಿದ್ದರು.

ಇನ್ನು ಈ ಘಟನೆ ಸಂಬಂಧ ಪೊಲೀಸರು ಕೂಡಲೇ ಬಿಗಿ ಕ್ರಮ ಕೈಗೊಂಡು, 6 ಎಫ್‌ಐಆರ್ ಇದುವರೆಗೆ ದಾಖಲಿಸಿ, 60ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿ ನಗರದಲ್ಲಿನ ಗಲಭೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಏಪ್ರಿಲ್ 20ರವರೆಗೆ ಜಾರಿಗೊಳಿಸಲಾಗಿದೆ.

vtv vitla
vtv vitla
- Advertisement -

Related news

error: Content is protected !!