Tuesday, September 1, 2026
spot_imgspot_img
spot_imgspot_img

ಹೆತ್ತವಳಿಗೆ ಬೇಡವಾದ ಕರುಳಕುಡಿ; ಹುಟ್ಟಿದ ದಿನವೇ ನವಜಾತ ಶಿಶುವನ್ನು ಪೊದೆಗೆ ಎಸೆದು ಹೋದ್ರು..!

- Advertisement -
- Advertisement -

ಚನ್ನಪಟ್ಟಣ: ನಗರದ ಹೌಸಿಂಗ್ ಬೋರ್ಡ್ ಪಾರ್ಕ್‌ನಲ್ಲಿ ನವಜಾತ ಹೆಣ್ಣು ಶಿಶುವನ್ನು ಬೀದಿಗೆಸೆದಿರುವ ಹೃದಯ ವಿದ್ರಾವಕ ಘಟನೆ ಬುಧವಾರ ಮುಂಜಾನೆ ಬೆಳಕಿಗೆ ಬಂದಿದೆ.

ಪ್ಲಾಸ್ಟಿಕ್ ಚೀಲದ ಒಳಗೆ ನವಜಾತ ಶಿಶುವನ್ನು ಹಾಕಿ ಹೌಸಿಂಗ್ ಬೋರ್ಡ್ ಪಾರ್ಕ್‌ನ ಪೊದೆಯಲ್ಲಿ ಬಿಸಾಡಿ ಹೋಗಿದ್ದು, ಮುಂಜಾನೆ ಮಗು ಅಳುತ್ತಿದ್ದ ಶಬ್ದ ಕೇಳಿಸಿಕೊಂಡ ಸ್ಥಳೀಯರು ಸಿಡಿಪಿಒ ಹಾಗೂ ಪೊಲೀಸರ ಗಮನಕ್ಕೆ ತಂದಿದ್ದಾರೆ. ಮಂಗಳವಾರ ತಡರಾತ್ರಿಯೇ ಮಗುವನ್ನು ಬಿಸಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

vtv vitla
vtv vitla

ಶಿಶು ಅಭಿವೃದ್ಧಿ ಇಲಾಖೆಯ ಪ್ರಥಮದರ್ಜೆ ಸಹಾಯಕ ಹರೀಶ್ ಕುಮಾರ್, ಅಂಗನವಾಡಿ ಕಾರ್ಯಕರ್ತೆ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಶಿಶುವನ್ನು ರಕ್ಷಿಸಿದ್ದಾರೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಿಶುವಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸಿಡಿಪಿಒ ಸಿದ್ದಲಿಂಗಯ್ಯ ತಿಳಿಸಿದ್ದಾರೆ. ಈ ಬಗ್ಗೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!