Saturday, June 20, 2026
spot_imgspot_img
spot_imgspot_img

₹100 ಕೋಟಿ ಲಂಚ ಆರೋಪ- ಇಂದು ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ

- Advertisement -
- Advertisement -

ನವದೆಹಲಿ: ಮಹಾರಾಷ್ಟ್ರ ಗೃಹ ಮಂತ್ರಿ ಅನಿಲ್ ದೇಶಮುಖ್ ಮೇಲಿನ ನೂರು ಕೋಟಿ ಲಂಚ ಆರೋಪ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮುಂಬೈ ಮಾಜಿ ಕಮಿಷನರ್ ಪರಂ ಬೀರ್ ಸಿಂಗ್ ಸುಪ್ರೀಂ ಕೋರ್ಟ್​ ಮೊರೆಹೋಗಿದ್ದರು. ಈ ಬಗ್ಗೆ ಇಂದು ಬೆಳಗ್ಗೆ 11ಕ್ಕೆ ವಿಚಾರಣೆ ನಡೆಯಲಿದೆ.

ಗೃಹ ಸಚಿವ ಅನಿಲ್ ದೇಶ್​ಮುಖ್  ಎನ್​ಐಎಯಿಂದ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸುತ್ತಿರುವ ಸಚಿನ್ ವಾಜೆಯವರಿಗೆ ತಿಂಗಳಿಗೆ 100 ಕೋಟಿ ರೂ. ಹಣ ಸಂಗ್ರಹಿಸುವಂತೆ ಹೇಳಿದ್ದರು ಎಂದು ಸಿಎಂಗೆ ಪತ್ರ ಬರೆದು ಪರಂಬೀರ್ ಸಿಂಗ್ ಆರೋಪಿಸಿದ್ದಾರೆ.

ಅಲ್ಲದೇ ಪರಮ್​ ಬೀರ್ ಸಿಂಗ್ ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯೂ ವಿಚಾರಣೆಗೆ ಬರಲಿದೆ. ಇನ್ನು ಈ ಪ್ರಕರಣ ಮಹಾರಾಷ್ಟ್ರ ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯಕ್ಕೆ 6 ಜಿ.ಬಿಗೂ ಹೆಚ್ಚಿನ ಡೇಟಾ ಒದಗಿಸಿದ್ದಾರೆ.

- Advertisement -

Related news

error: Content is protected !!