Thursday, May 2, 2024
spot_imgspot_img
spot_imgspot_img

ಅಕ್ರಮ ಗೋ ಸಾಗಾಟ ಪತ್ತೆ; ಆರೋಪಿಗಳು ಖಾಕಿ ವಶಕ್ಕೆ!

- Advertisement -G L Acharya panikkar
- Advertisement -

ಚಾರ್ಮಾಡಿ: ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ ಘಟನೆ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಚಂದ್ರಶೇಖರರವರು ತಮ್ಮ ಸಿಬ್ಬಂದಿಗಳೊಂದಿಗೆ ಸೆ.2ರ ರಾತ್ರಿ 08-30ರ ಸುಮಾರಿಗೆ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಟಾಟಾ -ಎಸ್ ವಾಹನವನ್ನು ಪರಿಶೀಲಿಸಿದಾಗ ಆ ವಾಹನದಲ್ಲಿ 1 ಕೋಣ 2 ಎಮ್ಮೆಗಳನ್ನು ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಆರೋಪಿಗಳು ಜಾನುವಾರುಗಳನ್ನು ಕೊಂದು ಅದರ ಮಾಂಸವನ್ನು ಹಣಕ್ಕಾಗಿ ಮಾರಾಟ ಮಾಡುವ ಉದ್ದೇಶಕ್ಕಾಗಿ ಜಾನುವಾರು ಸಾಗಾಟ ಮಾಡುವುದು ಕಂಡು ಬಂದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!