Sunday, July 6, 2025
spot_imgspot_img
spot_imgspot_img

ಅಕ್ರಮ ಹಣ ವರ್ಗಾವಣೆ ಪ್ರಕರಣ; ನಟಿ ಜಾಕ್ವಲಿನ್ ಫರ್ನಾಂಡೀಸ್‌‌ಗೆ ಜಾಮೀನು

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಭಂಧಿಸಿದಂತೆ ಬಾಲಿವುಡ್ ನಟಿ ಜಾಕ್ವಲೀನ್ ಫರ್ನಾಂಡೀಸ್ ಅವರಿಗೆ ದೆಹಲಿ ಕೋರ್ಟ್ 200 ಕೋಟಿ ರೂಪಾಯಿ ಮೊತ್ತದ ಜಾಮೀನು ಮಂಜೂರು ಮಾಡಿದೆ.

2 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ದೆಹಲಿಯ ಪಟಿಯಾಲ ಹೌಸ್ ಕೋರ್ಟ್‌ ನಟಿಗೆ ಜಾಮೀನು ಮಂಜೂರು ಮಾಡಿದೆ.

ಈ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಸಹ ಭಾಗಿಯಾಗಿದ್ದು, ನ.11 ರಂದು ಜಾರಿ ನಿರ್ದೇಶನಾಲಯ ಕೋರ್ಟ್ ನಲ್ಲಿ ವಾದ ಮಂಡಿಸಿ ಜಾಕ್ವಲೀನ್ ಫರ್ನಾಂಡೀಸ್ ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ ಎಂದು ಹೇಳಿತ್ತು. ಇದಕ್ಕೆ ಪ್ರತಿಯಾಗಿ ಎಲ್‌ಒಸಿಯನ್ನು ನೀಡಿದ ಹೊರತಾಗಿಯೂ ತನಿಖೆ ವೇಳೆ ಜಾರಿ ನಿರ್ದೇಶನಾಲಯ ಏಕೆ ಜಾಕ್ವಲೀನ್ ಫರ್ನಾಂಡೀಸ್ ಅವರನ್ನು ಬಂಧಿಸಿಲ್ಲ ಎಂದು ಕೋರ್ಟ್ ಪ್ರಶ್ನಿಸಿತ್ತು.

ಇನ್ನು ಸೆ.26 ರಂದು ಕೋರ್ಟ್ ಜಾಕ್ವಲೀನ್ ಫರ್ನಾಂಡೀಸ್ ಗೆ 50,000 ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ನೀಡಲು ಸೂಚಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಪೂರಕ ಚಾರ್ಜ್ ಶೀಟ್ ನ್ನು ಪರಿಗಣಿಸಿದ್ದ ಕೋರ್ಟ್, ಜಾಕ್ವಲೀನ್ ಫರ್ನಾಂಡೀಸ್ ಅವರನ್ನು ಕೋರ್ಟ್ ಎದುರು ಹಾಜರಾಗುವಂತೆ ಸೂಚಿಸಿತ್ತು. ಜಾರಿ ನಿರ್ದೇಶನಾಲಯದಿಂದ ಹಲವು ಬಾರಿ ತನಿಖೆಗೆ ಹಾಜರಾಗಲು ಸಮನ್ಸ್ ಪಡೆದಿದ್ದ ಫರ್ನಾಂಡೀಸ್ ವಿರುದ್ಧ ಪೂರಕ ಆರೋಪ ಪಟ್ಟಿಯಲ್ಲಿ ಮೊದಲ ಬಾರಿಗೆ ಉಲ್ಲೇಖಿಸಲಾಗಿತ್ತು.

- Advertisement -

Related news

error: Content is protected !!