Tuesday, June 9, 2026
spot_imgspot_img
spot_imgspot_img

ಅನರ್ಹತೆ ಬೆನ್ನಲ್ಲೇ ಟ್ವಿಟರ್‌ ಬಯೋ ಬದಲಿಸಿದ ರಾಹುಲ್‌ ಗಾಂಧಿ..!

- Advertisement -
- Advertisement -

ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಬಯೋವನ್ನು ಬದಲಾಯಿಕೊಂಡಿದ್ದಾರೆ. ಮೋದಿ ಸರ್‌ನೇಮ್‌ ಕುರಿತಾಗಿ ಹೇಳಿಕೆ ನೀಡುವ ವೇಳೆ ಒಬಿಸಿ ಜಾತಿಗಳ ನಿಂದನೆ ಮಾಡಿದ್ದ ರಾಹುಲ್‌ ಗಾಂಧಿಗೆ ಸೂರತ್‌ ಕೋರ್ಟ್‌ ಎರಡು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲಿಯೇ ರಾಹುಲ್‌ ಗಾಂಧಿ ಅವರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು. ಇದಾದ ಎರಡು ದಿನಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಯೋದಲ್ಲಿ ‘ಅನರ್ಹ ಸಂಸದ’ ಎಂದು ಬರೆದುಕೊಂಡಿದ್ದಾರೆ.

2019ರ ‘ಮೋದಿ ಉಪನಾಮ’ ಕುರಿತಾದ ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಒಂದು ದಿನದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯರಾಗಿ ಶುಕ್ರವಾರ ಅನರ್ಹಗೊಳಿಸಲಾಯಿತು. ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರ ದೂರಿನ ಮೇರೆಗೆ ಸೂರತ್ ನ್ಯಾಯಾಲಯವು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಗುರುವಾರ ವಿಧಿಸಿದೆ.

- Advertisement -

Related news

error: Content is protected !!