Friday, May 3, 2024
spot_imgspot_img
spot_imgspot_img

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -
vtv vitla

ದಾವಣಗೆರೆ: ಆನಗೋಡ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಯುವಕರು ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ.

ಪರಶುರಾಮ್ (24), ಸಂದೇಶ (23), ಶಿವು (26) ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಯುವಕರು ದಾವಣಗೆರೆಯ ರಾಮನಗರದ ನಿವಾಸಿಗಳೆಂದು ತಿಳಿದುಬಂದಿದೆ. ದಾವಣಗೆರೆ ತಾಲೂಕಿನ ಕಾಟಿಹಳ್ಳಿ ಗ್ರಾಮದ ದೇವಿ ಕಾರ್ಯದಲ್ಲಿ ಊಟ ಮಾಡಿ ವಾಪಸ್ಸಾಗುವ ವೇಳೆ ಅಪಘಾತ ನಡೆದಿದೆ.

ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಯುವಕರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!